ಹೆಬ್ರಿ: ಓವರ್ ಟೇಕ್ ಮಾಡುವಾಗ ಸರಣಿ ಅಪಘಾತ, ನಾಲ್ವರು ಆಸ್ಪತ್ರೆಗೆ ದಾಖಲು
ಉಡುಪಿ: ಕಾರೊಂದು ಬೈಕ್ ನ್ನು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ಈ ಅವಘಡ ಸಂಭವಿಸಿದೆ.ಅಪಘಾತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದು, ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ.
ಅಪಘಾತದಿಂದ ಉಡುಪಿ–ಹೆಬ್ರಿ–ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತು.ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




