ವಿದ್ಯಾರ್ಥಿನಿಯನ್ನೇ ಗೌಪ್ಯವಾಗಿ ಮದುವೆಯಾಗಿದ್ದ ಸರ್ಕಾರಿ ಶಾಲಾ ಶಿಕ್ಷಕ
ಬೀದರ್: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಗೌಪ್ಯವಾಗಿ ವಿವಾಹ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಶಿಕ್ಷಕ ಸಂದೀಪ್ ಕುಮಾರ್ ಅಜೂರೆ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಡಿಡಿಪಿಐ ಸಲೀಂ ಪಾಷಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಸಿ ತೂಗಾಂವ್ ಗ್ರಾಮದಲ್ಲಿ 15 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಯಾರಿಗೂ ತಿಳಿಯದಂತೆ ಶಿಕ್ಷಕ ಗೌಪ್ಯವಾಗಿ ಮದುವೆಯಾಗಿದ್ದ.




