ಮನೆ ಮಾಲಕನ ವಿರುದ್ಧ ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು: ಮನೆ ಮಾಲೀಕರ ವಿರುದ್ಧ ಡೆತ್‌ನೋಟ್ ಬರೆದಿಟ್ಟು ಕೇರಳ ಮೂಲದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಲಕೇಶಿನಗರ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಕೇರಳ ಮೂಲದ ವರ್ಗೀಸ್ (43) ಆತ್ಮಹತ್ಯೆ ಮಾಡಿಕೊಂಡವರು. ಒಂದು ವರ್ಷದ ಹಿಂದೆ ಕೇರಳದಿಂದ ಬೆಂಗಳೂರಿಗೆ ಬಂದಿದ್ದ ವರ್ಗೀಸ್, ಗ್ರೀನ್ ಅವಿನ್ಯೂ ಅಪಾರ್ಟ್‌ಮೆಂಟ್‌ನ ಮಹಿಳೆಯೊಬ್ಬರ ಬಳಿ ಕಾರು ಚಾಲಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದು, ಹೀಗಾಗಿ ಅದೇ ಅಪಾರ್ಟ್‌ಮೆಂಟ್‌ನ ಟೆರಾಸ್ ಮೇಲಿರುವ ಕೋಣೆಯಲ್ಲಿ ವಾಸವಾಗಿದ್ದ.
ಈ ಮಧ್ಯೆ ಕೆಲ ದಿನಗಳ ಹಿಂದೆ ಮನೆ ಮಾಲಕಿ ಮನೆಯಲ್ಲಿ ಸುಮಾರು 250 ಗ್ರಾಂ ಚಿನ್ನಾಭರಣ ಕಳುವಾಗಿದ್ದು, ಅದನ್ನು ವರ್ಗೀಸ್ ಮತ್ತು ಮತ್ತೂಬ್ಬ ಕೆಲಸದಾಕೆ ಕಳವು ಮಾಡಿದ್ದಾರೆ ಎಂದು ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವರ್ಗೀಸ್‌ನನ್ನು ಕರೆಸಿ ವಿಚಾರಣೆ ನಡೆಸಿ, ಕಳುಹಿಸಿದ್ದರು.




