ಪುತ್ತೂರು: ಮಹಿಳೆಯರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ
ಪುತ್ತೂರು: ಮಹಿಳೆಯರಿಬ್ಬರ ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆ ನಡೆಸಿ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಎಂಬಲ್ಲಿ ನಡೆದಿದೆ.
ಬಡಗನ್ನೂರು ನಿವಾಸಿ ಸುಲೇಖ ಮತ್ತು ಅವರ ಮನೆಗೆ ಕೆಲಸಕ್ಜೆ ಬಂದ ಗಿರಿಜಾ ಹಲ್ಲೆಗೊಳಗಾದವರು. ಸುರೇಶ್ ನಾಯ್ಕ ಎಂಬಾತ ಆರೋಪಿ ಎಂದು ತಿಳಿದುಬಂದಿದೆ.
ಹಲ್ಲೆಯಿಂದ ಅಸ್ವಸ್ಥಗೊಂಡ ಮಹಿಳೆಯರಿಬ್ಬರನ್ನು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.




