February 3, 2026

ನಿಯಂತ್ರಣ ತಪ್ಪಿ ಅಂಗಡಿಗಳಿಗೆ ಗುದ್ದಿದ ಕಾರು: ಚಾಲಕ ಸ್ಥಳದಲ್ಲೇ ಸಾವು

0
image_editor_output_image-1850292847-1692778706429.jpg

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಐದು ಪಲ್ಟಿಯಾಗಿ ಅಂಗಡಿಗಳಿಗೆ ಗುದ್ದಿದ ಘಟನೆ ತಾಲೂಕಿನ ಕಸ್ಬೆ ಕ್ಯಾಂಪ್ ಬಳಿ ನಡೆದಿದೆ. ಅಪಘಾತದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತನನ್ನು ಸಲೀಂ (34) ಎಂದು ಗುರುತಿಸಲಾಗಿದೆ. ಸಿಂಧನೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ರಸ್ತೆಯ ತಿರುವಿನಲ್ಲಿ ಕಾರು ಅತಿಯಾದ ವೇಗದಲ್ಲಿ ಚಲಾಯಿಸಿರುವುದು ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ವೇಗದ ಪರಿಣಾಮ ಅಪಘಾತದ ಬಳಿಕ ಕಾರು ರಸ್ತೆ ಪಕ್ಕದ ಅಂಗಡಿಗಳಿಗೂ ಗುದ್ದಿದೆ.

Leave a Reply

Your email address will not be published. Required fields are marked *

error: Content is protected !!