March 22, 2026

ಮಂಗಳೂರು: ದ್ವಿಚಕ್ರ ವಾಹನ ಕಳವು: ಓರ್ವ ಯುವಕ ಪೊಲೀಸರ ವಶಕ್ಕೆ

0
image_editor_output_image290512680-1692802910905.jpg


 
ಮಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿ ಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ಆರೋಪಿತ ಯುವಕ ಪತ್ತೆಯಾಗಿದ್ದಾನೆ.

ಆರೋಪಿ ಯುವಕ ಕಳವು ಮಾಡಿದ ಸ್ಕೂಟರನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದ. ನಗರದ ಪಂಪ್ ವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಕಳವು ಮಾಡಿದ್ದ ಸ್ಕೂಟರನ್ನು ಹಾಗೂ ಈ ಹಿಂದೆ ಈತನು ಕಳವು ಮಾಡಿದ್ದ ಮತ್ತೊಂದು ಹೋಂಡಾ ಆಕ್ಟಿವಾ ಸ್ಕೂಟರನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆತನಿಂದ ಒಟ್ಟು ಸುಮಾರು ಒಂದು ಲಕ್ಷ ಹತ್ತು ಸಾವಿರ ಬೆಲೆ ಬಾಳುವ 2 ದ್ವಿ ಚಕ್ರ ವಾಹನಗಳನ್ನು ಮಂಗಳೂರು ಪೂರ್ವ ಪೊಲೀಸ ಠಾಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

 

Leave a Reply

Your email address will not be published. Required fields are marked *

error: Content is protected !!