February 4, 2026

ಮೂಡಬಿದಿರೆ: ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ ಯುವಕನಿಗೆ ಹಲ್ಲೆ: ಸಂಘಪರಿವಾರದ ಮೂವರ ವಿರುದ್ಧ ದೂರು ದಾಖಲು

0
image_editor_output_image394166989-1692856896580.jpg

ಮೂಡುಬಿದಿರೆ: ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದು, ಈ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಸಂಜಯ್, ಅಭಿಲಾಷ್ , ಪ್ರೇಮ್ ಪ್ರಕರಣ ದಾಖಲಾದ ಮೂವರು ಆರೋಪಿಗಳು ಎಂದು ಗುರುತಿಸಲಾಗಿದೆ.

ಮೂಡುಬಿದಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಬೆಂಗಳೂರಿಗೆ ಹೋಗಲು ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಎದುರು ನಿಂತಿದ್ದಳು.

ಅದೇ ಸಮಯದಲ್ಲಿ ಆಕೆಯ ಸಹಪಾಠಿ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಆಕೆಯೊಂದಿಗೆ ಮಾತನಾಡಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!