ಉಡುಪಿ: ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶ
ಉಡುಪಿ: ಉಡುಪಿಯ ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಠಾಣೆಯ ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಟಪಾಡಿ ಏಣಗುಡ್ಡೆ ಗ್ರಾಮದ ಅಚ್ಚಡ ನಿವಾಸಿ, ಅನಿತಾ ಡಿಸಿಲ್ವಾ ರ ಸಂಬಂಧಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (32) ಬಂಧಿತ ಆರೋಪಿಯಾಗಿದ್ದಾನೆ.
ಈತನಿಂದ 6,90,713 ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಮೋಟಾರು ಸೈಕಲ್ ಸಹಿತ ಬೆಲೆಬಾಳುವ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.




