ತರಗತಿಗೆ ಹಾಜರಾಗದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ ಶಿಕ್ಷಕ: ಶಿಕ್ಷಕರ ಎದುರು ಲಾಂಗ್ ಝಳಪಿಸಿದ ವಿದ್ಯಾರ್ಥಿ
ಮಂಡ್ಯ: ತರಗತಿಗೆ ಹಾಜರಾಗದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಕ್ಕೆ ಪುಂಡ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಲಾಂಗ್ ಝಳಪಿಸಿದ ಪ್ರಕರಣ ನಾಗಮಂಗಲದಲ್ಲಿ ನಡೆದಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ. ಈ ಬಗ್ಗೆ ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
ಇದರಿಂದ ಕೋಪಗೊಂಡ ವಿದ್ಯಾರ್ಥಿ ಲಾಂಗ್ ಹಿಡಿದು ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.




