March 22, 2026

ಶಾಸಕನ ನಿವಾಸ ಆವರಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

0
image_editor_output_image-802227262-1692943954455.jpg

ಕಲಬುರಗಿ: ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ನಿವಾಸದಲ್ಲಿ ಮನೆ ಕೆಲಸದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಲಬುರಗಿ ನಗರದ ಶರಣ ನಗರ ಬಡಾವಣೆಯಲ್ಲಿ ಶಾಸಕರ ನಿವಾಸದಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ದೇವೇಂದ್ರ ಪಟ್ಟೆದಾರ ಎಂದು ಗುರುತಿಸಲಾಗಿದೆ.

ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದುಬಂದರೂ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಅಡ್ಡೂರು ಶ್ರೀನಿವಾಸಲು, ಅಜಯ್ ಸಿಂಗ್ ಅವರ ಮನೆಯಲ್ಲಿ ಕೆಲಸದಾತ ದೇವೇಂದ್ರನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೆಳಗ್ಗೆ 6 ಗಂಟೆಗೆ ನಮಗೆ ಈ ಬಗ್ಗೆ ಮಾಹಿತಿ ಬಂದಿದೆ. ಎಫ್‌ಎಸ್‌ಎಲ್ ತಂಡದವರು, ನಮ್ಮ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave a Reply

Your email address will not be published. Required fields are marked *

error: Content is protected !!