March 22, 2026

ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಹೊಸ BPL Card

0
image_editor_output_image-1602161339-1692956151032.jpg

ಬೆಂಗಳೂರು: ರಾಜ್ಯ ಸರಕಾರವು ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಮಾತ್ರ ಹೊಸದಾಗಿ ಆದ್ಯತಾ ಪಡಿತರ ಚೀಟಿ ನೀಡಲು ವಿಶೇಷ ಅನುಮೋದನೆ ನೀಡಿದೆ.

ಸರಕಾರದ ಈ ಕ್ರಮದಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಡವರಿಗೆ ಪಡಿತರ ಚೀಟಿ ಆಸರೆಯಾಗುವ ಭರವಸೆ ಮೂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸ ಆದ್ಯತಾ ಪಡಿತರ ಚೀಟಿ ಪಡೆಯಲಿಚ್ಛಿಸುವವರು ತಮ್ಮ ವ್ಯಾಪ್ತಿಯ ತಹಸೀಲ್ದಾರ್‌ಗೆ ಅಗತ್ಯ ವೈದ್ಯಕೀಯ ದಾಖಲೆ ಹಾಗೂ ಆರ್ಥಿಕವಾಗಿ ದುರ್ಬಲರಾಗಿರುವ ಬಗ್ಗೆ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

Leave a Reply

Your email address will not be published. Required fields are marked *

error: Content is protected !!