February 4, 2026

ಮೂಲ್ಕಿ: ಬಂಧಿಸಲು ಬಂದಾಗ ಕೀಟನಾಶಕ ಸೇವಿಸಿದ ಆರೋಪಿ: ಅಸ್ವಸ್ಥ, ಆಸ್ಪತ್ರೆಗೆ ದಾಖಲು

0
IMG-20230825-WA0008.jpg



ಮೂಲ್ಕಿ: ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಬಂದ ಸಂದರ್ಭದಲ್ಲಿ ಆರೋಪಿಯೋರ್ವ ಕೀಟನಾಶಕ ಸೇವಿಸಿ, ಬಂಧಿಸಿ ಠಾಣೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅಸ್ವಸ್ಥನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ2017 ರಲ್ಲಿ ನಡೆದ ಅಪರಾಧ ಪ್ರಕರಣ ಒಂದರ ಆರೋಪಿಯಾಗಿದ್ದ ಮಂಗಳೂರಿನ ಮುಚ್ಚೂರು ಗ್ರಾಮದ ಕರುಣಾಕರ ಶೆಟ್ಟಿ (44) ಎಂಬವರ ವಿರುದ್ದ ವಾರಂಟ್ ಕಾರ್ಯಗತಗೊಳಿಸುವಂತೆ ನ್ಯಾಯಲಯದ ಆದೇಶ ನೀಡಿತ್ತು.

ಕರುಣಾಕರ ಶೆಟ್ಟಿ ಉಡುಪಿಯ ಶಿವಳ್ಳಿ ಯಲ್ಲಿರುವ ರಸಿಕ ಬಾರ್ ನಲ್ಲಿ ಕೆಲಸ ಮಾಡಿಕೊಂಡಿರುವ ಬಗೆಗಿನ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಗುರುಪ್ಪ ಕಾಂತಿ ಮತ್ತು ಸಿಬ್ಬಂದಿಗಳು ಆಗಸ್ಟ್ 24 ರಂದು ಸಂಜೆ ವಾರಂಟ್ ಆದೇಶ ಕಾರ್ಯಗತಗೊಳಿಸಿ ಆರೋಪಿಯನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ಆರೋಪಿ ಕೆಲಸ ಮಾಡಿಕೊಂಡಿರುವ ಉಡುಪಿಯ ಶಿವಳ್ಳಿಯ ರಸಿಕ ಬಾರ್ ಗೆ ಬಂದಿದ್ದರು.

ಪೊಲೀಸರು ಆಪಾದಿತನನ್ನು ವಶಕ್ಕೆ ಪಡೆಯುವ ಸಮಯ ತಾನು ಬಟ್ಟೆ ಹಾಕಿಕೊಂಡು ಬರುವುದಾಗಿ ಬಾರ್‌ನ ಮೇಲೆ ಇರುವ ರೂಮಿನೊಳಗೆ ಹೋದ ಕರುಣಾಕರ ಯಾವುದೋ ಕೀಟನಾಶಕ ಸೇವನೆ ಮಾಡಿ ಬಂದು ವಾಹನದಲ್ಲಿ ಪ್ರಯಾಣಿಸುವಾಗ ಮಾರ್ಗ ಮಧ್ಯೆ ಅಸ್ವಸ್ಥಗೊಂಡವರನ್ನು, ಬಜಪೆ ಪೋಲಿಸ್ ಠಾಣಾ ಉಪನಿರೀಕ್ಷಕರು ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರ ದಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!