February 4, 2026

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image1963160908-1693026996861.jpg

ಮಂಗಳೂರು: ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೂಡಬಿದ್ರೆ ಗಂಟಲ್ಕಟ್ಟೆ ನಿವಾಸಿ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಕದ್ರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!