February 4, 2026

ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image-505335285-1693029186631.jpg

ಮಂಗಳೂರು: ಮಂಗಳೂರಿನ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ 2015 ರಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಮತ್ತು ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಸಿಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬೋಳಾರ ಮುಳಿಹಿತ್ಲು ಅರೇಕೆರೆ ಬೈಲ್ ನಿವಾಸಿ 30 ವರ್ಷ ಪ್ರಾಯದ ಅಭಿಜಿತ್‌ ಯಾನೆ ಅಭಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆತ ವಿದೇಶದಿಂದ ಭಾರತಕ್ಕೆ ಬರುವ ವೇಳೆ ಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಆರೋಪಿಗೆ ನ್ಯಾಯಾಂಗ ಬಂಧನ ವಿಧಿಲಾಗಿದೆ.

ಆರೋಪಿಯ ದಸ್ತಗಿರಿಗಾಗಿ ಲುಕ್‌ ಔಟ್‌ ನೋಟೀಸು ಜಾರಿ ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!