ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಾಲಾ ಮಕ್ಕಳಿಗೆ ಹೇಳಿದ ಶಿಕ್ಷಕಿ: ಶಿಕ್ಷಕಿ ನಡೆಗೆ ಭಾರೀ ಆಕ್ರೋಶ
ಲಕ್ನೋ: ಉತ್ತರ ಪ್ರದೇಶದ ಮುಜಾಫರ್‌ನಗರದ ಖಾಸಗಿ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಶಾಲಾ ಮಕ್ಕಳಿಗೆ ಹೇಳುತ್ತಿರುವ ದೃಶ್ಯದ ವೀಡಿಯೋ ವೈರಲ್ ಆಗಿದೆ. ಶಿಕ್ಷಕಿ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಈ ವಿಡಿಯೋ ವೈರಲ್ ಆಗಿದೆ. ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಸೂಚಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಹುಡುಗ ಮುಸ್ಲಿಂ ಸಮುದಾಯದವನು.
ಶಿಕ್ಷಕಿ ಕ್ರಮವು ಕೋಮುವಾದಿ ಸ್ವರೂಪದ್ದಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ವೀಡಿಯೋದಲ್ಲಿ ಶಿಕ್ಷಕಿ ಕೋಮುವಾದಿ ಪದಗಳನ್ನು ಬಳಸಿದ್ದು, ಪೊಲೀಸರೂ ಇದನ್ನು ಖಚಿತಪಡಿಸಿದ್ದಾರೆ.




