ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು
ಉತ್ತರ ಕನ್ನಡ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹರಿದೇವನಗರದಲ್ಲಿ ನಡದಿದೆ.
ಮನೆ ಬಳಿ ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಸ್ತುತಿ(3) ಸಾವು. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು ಮುಂದಾಗಿದ್ದಾಳೆ.
ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಪೊಷಕರು ಹಾಗೂ ಬಡಾವಣೆಯ ನಿವಾಸಿಗಳೆಲ್ಲ ಮಗು ನಾಪತ್ತೆ ಎಂದು ಹುಡುಕಾಡುವಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.