February 4, 2026

ಮಂಗಳೂರು: ಟಿಪ್ಪರ್-ಸ್ಕೂಟರ್ ನಡುವೆ ಅಪಘಾತ: ವಿದ್ಯಾರ್ಥಿ ಮೃತ್ಯು

0
IMG-20230827-WA0001.jpg



ಮಂಗಳೂರು: ಅಡ್ಯಾರ್‌‌ನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ.

ಇನ್ನು ಈತ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತಸ್ರಾವವುಂಟಾಗಿತ್ತು ಎನ್ನಲಾಗಿದೆ.

ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!