March 22, 2026

ಟ್ರಕ್‌ನಲ್ಲಿ ಸಾಗಿಸುತ್ತಿದ್ದ 3.12 ಕೋಟಿ ರೂ.ಮೌಲ್ಯದ ಚಿನ್ನದ ಬಿಸ್ಕೆಟ್‌ಗಳ ವಶ

0
27-08-2023akgold.jpg


ಕೋಲ್ಕತಾ: ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ 45 ಚಿನ್ನದ ಬಿಸ್ಕೆಟ್‌ಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾಗ ಟ್ರಕ್ ಚಾಲಕನನ್ನು ಬಂಧಿಸಿರುವುದಾಗಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಶನಿವಾರ ತಿಳಿಸಿದೆ.


ಶನಿವಾರ ಪೆಟ್ರಾಪೋಲ್ ಚೆಕ್‌ಪಾಯಿಂಟ್‌ನಲ್ಲಿ ವಾಹನ ತಪಾಸಣೆ ವೇಳೆ ಟ್ರಕ್‌ನಲ್ಲಿ ಎರಡು ಪ್ಯಾಕೆಟ್ ಚಿನ್ನದ ಬಿಸ್ಕತ್ತುಗಳನ್ನು ಬಚ್ಚಿಟ್ಟಿರುವುದನ್ನು ಪತ್ತೆ ಮಾಡಿದ್ದಾರೆ.

ಆರೋಪಿಯನ್ನು ಸಾಮ್ರಾಟ್ ಬಿಸ್ವಾಸ್ ಎಂದು ಗುರುತಿಸಲಾಗಿದೆ.ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿದ ಟ್ರಕ್ ಖಾಲಿಯಾಗಿ ಇತ್ತು. ಟ್ರಕ್‌ನಿಂದ ಒಟ್ಟು 5.24 ಕೆಜಿ ತೂಕದ 45 ಚಿನ್ನದ ಬಿಸ್ಕೆಟ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!