March 21, 2026

ವಿಶಾಖಪಟ್ಟಣಂ: ರಾಮ್ಕಿ ಫಾರ್ಮಾ ಸಿಟಿಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಇಬ್ಬರು ಮೃತ್ಯು

0
images-78.jpeg

ಆಂಧ್ರಪ್ರದೇಶ: ವಿಶಾಖಪಟ್ಟಣಂನ ರಾಮ್ಕಿ ಫಾರ್ಮಾ ಸಿಟಿಯಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

ಪೊಲೀಸರ ಪ್ರಕಾರ ಮೃತರನ್ನು ದುರ್ಗಾ ಪ್ರಸಾದ್ ಮತ್ತು ಮಣಿಕಂಠ ಎಂದು ಗುರುತಿಸಲಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಿಂಗ್ ಜಾರ್ಜ್ ಆಸ್ಪತ್ರೆಗೆ (ಕೆಜಿಎಂ) ರವಾನಿಸಲಾಗಿದೆ. ಮೃತ ವ್ಯಕ್ತಿಗಳು ಕಂಪನಿಯ ಪಂಪ್ ಹೌಸ್ ಅನ್ನು ತೆರೆದಾಗ ಈ ಘಟನೆ ಸಂಭವಿಸಿದೆ ಮತ್ತು ಪಂಪ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ ಎಂದು ಪರವಾಡ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.
ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!