ಬಿಜೆಪಿ ಸಂಸದನ ನಿವಾಸದಲ್ಲಿ 10 ವರ್ಷದ ಬಾಲಕನ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಅಸ್ಸಾಂ: ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದ ರಾಜ್‌ದೀಪ್ ರಾಯ್ ಅವರ ನಿವಾಸದಲ್ಲಿ ಶನಿವಾರ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ.
ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಾಯಿ ರಾಜ್‌ದೀಪ್ ಅವರ ಮನೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಧೋಲೈ ಪ್ರದೇಶದವರಾಗಿದ್ದು, ಇಬ್ಬರು ಮಕ್ಕಳೊಂದಿಗೆ ತಮ್ಮ ನಿವಾಸದಲ್ಲಿ ವಾಸಗಿದ್ದರು.
ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗ ತಕ್ಷಣವೇ ರಾಜ್‌ದೀಪ್ ರಾಯ್‌ಗೆ ಈ ಬಗ್ಗೆ ತಿಳಿಸಲಾಗಿತ್ತು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಸಂಸದರು ತಿಳಿಸಿದ್ದಾರೆ.