March 21, 2026

ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಪ್ರಕರಣ:
ಆರೋಪಿ ಡಾ. ರತ್ನಾಕರ್ ಗೆ ಜಾಮೀನು

0
Sexual-Harassment-at-Workplace-District-Nodal-Officer-Dr-Ratnakar-Arrested.jpg

ಮಂಗಳೂರು: ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿ ಡಾ. ರತ್ನಾಕರ್ ಗೆ ಜಾಮೀನು ಮಂಜೂರಾಗಿದೆ.

ಮಂಗಳೂರಿನ 3ನೇ ಜೆಎಂಎಫ್ ಸಿ ನ್ಯಾಯಾಲಯ ಈ ಆದೇಶವನ್ನು ಕೊಟ್ಟಿದೆ. ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಆಧಾರದಲ್ಲಿ ಆರೋಪಿ ಡಾ. ರತ್ನಾಕರ್ ನನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.
ಪೊಲೀಸ್ ಕಸ್ಟಡಿ ಪೂರ್ಣಗೊಂಡ ಹಿನ್ನೆಲೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

Leave a Reply

Your email address will not be published. Required fields are marked *

You may have missed

error: Content is protected !!