ಉಡುಪಿ: ಉಡುಪಿಯ ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘದ ಬೈಲೂರು ಶಾಖೆಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.27ರಂದು ಉಡುಪಿಯ ಅಲೆವೂರಿನಲ್ಲಿ ನಡೆದಿದೆ.
ಮೃತರನ್ನು ಅಲೆವೂರು ನಿವಾಸಿ ಮಂಜೇಶ್ ಕುಮಾರ್ (49) ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಕೆಲವು ದಿನಗಳ ಹಿಂದೆ ಗುಣಮುಖರಾಗಿ ಸಂಘದ ವ್ಯವಸ್ಥಾಪಕರಾಗಿ ಪದೋನ್ನತಿ ಪಡೆದಿದ್ದರು.