ಗುದನಾಳದೊಳಗೆ ಬಚ್ಚಿಟ್ಟುಕೊಂಡಿದ್ದ ಚಿನ್ನ ಸಾಗಟ: 90 ಲಕ್ಷ ರೂಪಾಯಿ 4 ಕ್ಯಾಪ್ಸುಲ್ ಆಕಾರದ ಚಿನ್ನ ಪತ್ತೆ
ಕೊಚ್ಚಿ: ಕುವೈಟ್ ನಿಂದ ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮಹಿಳೆಯೊಬ್ಬರ ಬಳಿಯಿಂದ 90 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆನಂದವಲ್ಲಿ ವಿಜಯಕುಮಾರ್ ಎಂಬ ಪ್ರಯಾಣಿಕರನ್ನು ತಪಾಸಣೆ ನಡೆಸಿದ ಕಸ್ಟಮ್ಸ್ ಸಿಬಂದಿ, ಆಕೆಯ ಗುದನಾಳದೊಳಗೆ ಬಚ್ಚಿಟ್ಟುಕೊಂಡಿದ್ದ 90 ಲಕ್ಷ ರೂಪಾಯಿ ಮೌಲ್ಯದ 1.70 ಕೆಜಿ ತೂಕದ, ಪೇಸ್ಟ್ ರೂಪದ ಚಿನ್ನವನ್ನು ಹೊಂದಿದ್ದ 4 ಕ್ಯಾಪ್ಸುಲ್ ಆಕಾರದ ಪ್ಯಾಕೆಟ್‌ಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದು ಕೊಂಡಿದ್ದಾರೆ.
ಈ ಕುರಿತಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಏಪ್ರಿಲ್‌ನಲ್ಲಿ ಸುಮಾರು 1.4 ಕೆ.ಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಸಿಬ್ಬಂದಿಯನ್ನು ಕೊಚ್ಚಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು.