February 3, 2026

ಮಂಗಳೂರು: ಕಾರು ಕಳವು ಪ್ರಕರಣ: 27 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

0
image_editor_output_image-57541964-1693229481528.jpg


ಮಂಗಳೂರು: ಕಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕೇರಳದ ಕಲ್ಲಿಕೋಟೆಯ ಮನೋಜ್ (52) ಎಂದು ಗುರುತಿಸಲಾಗಿದೆ.

1996ರ ಡಿಸೆಂಬರ್ 24ರಂದು ಅಶೋಕ ನಗರದ ವಿನ್ಸೆಂಟ್ ಪಿರೇರಾ ಎಂಬವರಿಗೆ ಸೇರಿದ ಕಾರನ್ನು ಅದರ ಚಾಲಕ ದಾಮೋದರ ಎಂಬವರು ಕೊಟ್ಟಾರದ ರಸ್ತೆ ಬದಿಪಾಕ್ ಮಾಡಿದ್ದು, ಮರುದಿನ ನೋಡಿದಾಗ ಅದು ಕಾಣೆಯಾಗಿತ್ತು. ಈ ಬಗ್ಗೆ ಮರುದಿನ ವಿನ್ಸೆಂಟ್ ಪಿರೇರಾ ದೂರು ನೀಡಿದ್ದರು.

ಇನ್ನು ಈ ಕಾರನ್ನು ಕಳವುಗೈದಿದ್ದ ಆರೋಪಿ ಮನೋಜ್ ಎಂಬಾತ ಕಲ್ಲಿಕೋಟೆಯಲ್ಲಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಉರ್ವ ಪೊಲೀಸರು ಆಗಸ್ಟ್ 23ರಂದು ಕಲ್ಲಿಕೋಟೆಯಿಂದ ಬಂಧಿಸಿದ್ದಾರೆ.

ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಆಗಸ್ಟ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.”

Leave a Reply

Your email address will not be published. Required fields are marked *

You may have missed

error: Content is protected !!