ಪ್ರೀತಿಸಿ ಮದುವೆಯಾಗಿದ್ದ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
ಚಿಕ್ಕಬಳ್ಳಾಪುರ: ಕುಟುಂಬದವರ ವಿರೋಧದ ನಡುವೆಯೂ ತನಗಿಂತ ಎರಡು ವರ್ಷ ಕಿರಿಯವನನ್ನ ಪ್ರೀತಿಸಿ ಮದುವೆಯಾಗಿದ್ದ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ನಡೆದಿದೆ.
ಶಿಡ್ಲಘಟ್ಟ ನಗರದ ಮಯೂರ ವೃತ್ತದ ಬಳಿ ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ವಿವಾಹಿತೆ ನಾಗಮಣಿ (23) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.