December 4, 2024

ಚಿಕ್ಕಮಗಳೂರು: ಆಡಳಿತಾಧಿಕಾರಿಯ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ವೈದ್ಯ

0

ಚಿಕ್ಕಮಗಳೂರು: ಆಡಳಿತಾಧಿಕಾರಿಗಳ ಕಿರುಕುಳ ಆರೋಪ, ವೈದ್ಯರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

ಕೊಪ್ಪ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಸಂದೀಪ್ ಬಾಳೆಹೊನ್ನೂರಿನ ಮನೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆಡಳಿತಾಧಿಕಾರಿ ಪದೇ-ಪದೇ ನೋಟಿಸ್ ನೀಡುತ್ತಿದ್ದರು ಎನ್ನಲಾಗುತ್ತಿದೆ ಹಾಗೂ ವೈಯಕ್ತಿಕ ಕಾರಣಗಳಿಂದಲೂ ವೈದ್ಯರು ಮನನೊಂದಿದ್ದರು ಎನ್ನಲಾಗುತ್ತಿದೆ.

ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ವೈದ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!