December 12, 2024

ಅಡುಗೆ ಅನಿಲಕ್ಕೆ 200 ರೂಪಾಯಿ ಸಬ್ಸಿಡಿ: ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ
 

0


ನವದೆಹಲಿ : ಹಲವಾರು ವರ್ಷಗಳ ಹಿಂದೆ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿಯನ್ನು ಕೊಡಲು ನಿರ್ಧರಿಸಿದೆ.

ಕೇಂದ್ರ ಸಚಿವ ಸಂಪುಟ ಪುನಃ ಸಬ್ಸಿಡಿಯನ್ನು ಕೊಡುವ ನಿರ್ಧಾರ ತೆಗೆದುಕೊಂಡಿದ್ದು, ದೇಶದ ಎಲ್ಲಾ 33 ಕೋಟಿ ಎಲ್‌ಪಿಜಿ ಗ್ರಾಹಕರಿಗೆ ಇದು ಅನ್ವಯಿಸುತ್ತದೆ. ಇದರಿಂದ ವಾರ್ಷಿಕ ಒಟ್ಟು ಸುಮಾರು 10,000 ಕೋಟಿ ರೂ. ಆರ್ಥಿಕ ಹೊರೆಯಾಗಲಿದ್ದು ಈ ವರ್ಷದ ಉಳಿಕೆ ಅವಧಿಗೆ 7,680 ಕೋಟಿ ರೂಪಾಯಿ ವೆಚ್ಚವಾಗಲಿದೆ.

ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಎಲ್ಲಾ ಗ್ರಾಹಕರಿಗೆ 200 ರೂಪಾಯಿಯಷ್ಟು ಇಳಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಇಂದು ಕೇಂದ್ರ ಸಂಪುಟದ ನಿರ್ಧಾರಗಳನ್ನು ವಿವರಿಸಿದರು. ಸಬ್ಸಿಡಿಯನ್ನು ಬ್ಯಾಂಕ್ ಖಾತೆಗಳಿಗೆ ಕಳುಹಿಸಲಾಗುತ್ತದೆಯೇ ಅಥವಾ ಸಿಲಿಂಡರ್ ಬೆಲೆಯಲ್ಲಿ ಫ್ಲಾಟ್ ರಿಯಾಯಿತಿಯನ್ನು ನೀಡಲಾಗುತ್ತದೆಯೇ ಎಂದು ಉತ್ತರಿಸಲು ಠಾಕೂರ್ ನಿರಾಕರಿಸಿದರು.

 

 

ಇದಲ್ಲದೆ, ಉಜ್ವಲ ಯೋಜನೆಯಡಿ ಇನ್ನೂ 75 ಲಕ್ಷ ಮಂದಿಗೆ ಉಚಿತ ಅನಿಲ ಸಂಪರ್ಕವನ್ನು ಕಲ್ಪಿಸಿಕೊಡಲಾಗುತ್ತದೆ. ಉಜ್ವಲ ಗ್ರಾಹಕರು ಪ್ರತಿ ಸಿಲಿಂಡರ್‌ಗೆ ಒಟ್ಟು 400 ರೂಪಾಯಿ ಸಬ್ಸಿಡಿ ಪಡೆಯಲಿದ್ದಾರೆ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.”

Leave a Reply

Your email address will not be published. Required fields are marked *

error: Content is protected !!