ಮಂಗಳೂರು: ಯುವಕನೋರ್ವನ ಕೊಲೆ ಯತ್ನ ಪ್ರಕರಣ: ಆರೋಪಿ ಸಿಸಿಬಿ ಪೊಲೀಸರ ವಶಕ್ಕೆ
ಮಂಗಳೂರು: ನಗರ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದಾತನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
12-08-2023 ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಮೀರ್ ಹಂಸ ಎಂಬಾತನು ಗಲಾಟೆ ಮಾಡಿಕೊಂಡು ಏಕಾಎಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿನಾತ ನಮೀರ್ ಹಂಸನು ಕೃತ್ಯ ನಡೆಸಿದ ನಂತರ ತಲೆಮರೆಸಿಕೊಂಡಿದ್ದನು. ಆತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಇದೀಗ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


