December 4, 2024

25,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ ಸ್ಟೇಬಲ್

0

ಬೆಂಗಳೂರು: ಲಂಚ ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಸೈಬರ್‌ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಎಂ.ಲೋಕೇಶ್‌ ಬಂಧನಕ್ಕೊಳಗಾದ ಹೆಡ್‌ ಕಾನ್‌ಸ್ಟೇಬಲ್.‌ ವ್ಯಕ್ತಿಯೊಬ್ಬರಿಂದ 25,000 ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಆರೋಪಿ ಹೆಸರನ್ನ ಕೈ ಬಿಡಲಿಕ್ಕೆ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಪ್ಪತೈದು ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದಾರೆ.

ರಮೇಶ್ ಎಂಬಾತನ ವಿರುದ್ಧ ಅತ್ತಿಬೆಲೆ ಠಾಣೆಯಲ್ಲಿ ಜಾತಿನಿಂದನೆ, ಅತ್ಯಾಚಾರ ಕೇಸ್ ದಾಖಲಾಗಿತ್ತು. ಪ್ರಕರಣದಲ್ಲಿ ರಮೇಶ್‌ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ರಮೇಶ್ ತಾಯಿ ರೂಪಾ ಎಂಬವರ ಬಳಿ ಹೆಡ್‌ ಕಾನ್‌ಸ್ಟೇಬಲ್‌ ಲೋಕೇಶ್‌ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.

Leave a Reply

Your email address will not be published. Required fields are marked *

error: Content is protected !!