March 17, 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟಂಬರ್‌ ನಿಂದ ಶನಿವಾರ ಇಡೀ ದಿನ ತರಗತಿ

0
image_editor_output_image52066608-1693375327261.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆಯ ಸಂದರ್ಭದಲ್ಲಿ ಶಾಲೆಗಳಿಗೆ ನೀಡಲಾಗಿದ್ದ 7 ದಿನಗಳ ರಜೆಯನ್ನು ಭರ್ತಿ ಮಾಡಲು ಮುಂದಿನ ಸೆಪ್ಟೆಂಬರ್‌ಮೊದಲ ವಾರದಿಂದ ಮೊದಲ್ಗೊಂಡು ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲಾ ತರಗತಿಗಳನ್ನು ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ.

ಜುಲೈ ತಿಂಗಳಲ್ಲಿ ಅತಿ ಹೆಚ್ಚು ಮಳೆಯಾದ ಸಂದರ್ಭದಲ್ಲಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಒಟ್ಟು 7 ದಿನ ರಜೆ ಸಾರಲಾಗಿತ್ತು.

ಈ 7 ದಿನಗಳ ರಜೆಯಿಂದ ವಿದ್ಯಾರ್ಥಿಗಳಿಗೆ ಆದ ತರಗತಿ ನಷ್ಟವನ್ನು ಭರ್ತಿ ಮಾಡಲು 14 ಶನಿವಾರಗಳಂದು ಇಡೀ ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!