ಉಡುಪಿ: ಸ್ಕೂಟರ್, ಟ್ಯಾಂಕರ್ ನಡುವೆ ಅಪಘಾತ: ಸಹಸವಾರ ಸಾವು

ಉಡುಪಿ: ಸ್ಕೂಟರ್ ಹಾಗೂ ಟ್ಯಾಂಕರ್ ನಡುವೆ ನಡೆದ ಅಪಘಾತದಲ್ಲಿ ಸಹ ಸವಾರ ಸಾವನ್ನಪ್ಪಿದ ಘಟನೆ ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿಯ ಹೆಜಮಾಡಿ ಕನ್ನಂಗಾರಿನಲ್ಲಿ ನಡೆದಿದೆ.
ಮೃತ ಯುವಕ ಬೈಕ್ ಸಹ ಸವಾರ ಜಾರ್ಖಂಡ್ ಮೂಲದ ಹೆಜಮಾಡಿ ಬ್ರಹ್ಮಸ್ಥಾನ ಬಳಿ ಬಾಡಿಗೆ ಮನೆಯೊಂದರ ನಿವಾಸಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಸದ್ದಾಂ ಅನ್ಸಾರಿ (20) ಎಂದು ಗುರುತಿಸಲಾಗಿದೆ.
ಸ್ಕೂಟರ್ ಸವಾರ ಪರ್ವೇಜ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮನೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಹೆಜಮಾಡಿ ಒಳ ರಸ್ತೆಯಾಗಿ ಹೆದ್ದಾರಿ ಕಡೆಗೆ ಹೋಗುತ್ತಿದ್ದ ಸಂದರ್ಭ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಗೆ ಸ್ಕೂಟರ್ ಡಿಕ್ಕಿಯಾಗಿದೆ.