ಅಮೆಜಾನ್‌ನಲ್ಲಿ ಮ್ಯಾನೇಜರ್ ನನ್ನು ಗುಂಡಿಕ್ಕಿ ಹತ್ಯೆ
ನವದೆಹಲಿ: ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ನವದೆಹಲಿಯ 36 ವರ್ಷದ ವ್ಯಕ್ತಿಯನ್ನು ದೆಹಲಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹರ್‌ಪ್ರೀತ್ ಗಿಲ್(36) ಹತ್ಯೆಯಾದ ವ್ಯಕ್ತಿಯಾಗಿದ್ದು ಈತ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಹತ್ಯೆಗೈದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.