ಮಡಿಕೇರಿ: ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆ

ಮಡಿಕೇರಿ: ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ಮಹಿಳಾ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಂಡ್ಯ ಮೂಲದ ರಶ್ಮಿ(27) ಮೃತ ಮಹಿಳಾ ಅಧಿಕಾರಿ.
ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಅರಣ್ಯ ಇಲಾಖೆ ರಿಸರ್ಚ್ ವಿಭಾಗದಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.