March 17, 2026

ಇಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ: ಒಂದೇ ಕುಟುಂಬದ ನಾಲ್ವರು ಸಜೀವ ದಹನ

0
image_editor_output_image-178567861-1693385901244.jpg

ಮುಂಬೈ: ಎಲೆಕ್ಟ್ರಿಕ್ ಹಾರ್ಡ್‌ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವದಹನವಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಬೆಂಕಿ ಅವಘಡ ಬುಧವಾರ ಮುಂಜಾನೆ 5 ಗಂಟೆಯ ವೇಳೆಗೆ ಸಂಭವಿಸಿದೆ. ಎಲೆಕ್ಟ್ರಿಕ್ ಅಂಗಡಿಯ ಹಿಂಭಾಗದಲ್ಲಿ ಕುಟುಂಬವೊಂದು ವಾಸವಿದ್ದು, ಬೆಂಕಿ ಹೊತ್ತಿಕೊಂಡ ಸಂದರ್ಭ ಅವರು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಚಿಮ್ನಾರಾಮ್ ಚೌಧರಿ (45), ನಮ್ರತಾ ಚಿಮ್ನಾರಾಮ್ ಚೌಧರಿ (40), ಭವೇಶ್ ಚೌಧರಿ (15) ಮತ್ತು ಸಚಿನ್ ಚೌಧರಿ (10) ಎಂದು ಗುರುತಿಸಲಾಗಿದೆ.

ಕಟ್ಟಡದ ನೆಲಮಹಡಿಯಲ್ಲಿದ್ದ ಹಾರ್ಡ್ವೇರ್ ಅಂಗಡಿಯ ಹಿಂಭಾಗದಲ್ಲಿ ಮಲಗಿದ್ದ ನಾಲ್ವರ ಶವವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೋರೇಷನ್‌ನ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!