March 16, 2026

ಮಂಗಳೂರು: ಖಾಸಗಿ ಬಸ್‌ಗೆ ಡೋರ್ ಕಡ್ಡಾಯ: ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಆದೇಶ

0
image_editor_output_image2011353091-1693414237973.jpg


 
ಮಂಗಳೂರು: ನಂತೂರಿನಲ್ಲಿ ಖಾಸಗಿ ಬಸ್ ನಿರ್ವಾಹಕ ನಿಧನ ಹಿನ್ನಲೆಯಲ್ಲಿ ಎಲ್ಲಾ ಖಾಸಗಿ ಬಸ್‌ಗಳಿಗೆ ಇನ್ನು ಡೋರ್ ಕಡ್ಡಾಯವಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಕುಲ್‌ದೀಪ್ ಕುಮಾರ್ ಜೈನ್ ಆದೇಶ ಹೊರಡಿಸಿದ್ದಾರೆ.

ನಂತೂರಿನಲ್ಲಿ ಕಂಡಕ್ಟರ್ ಬಿದ್ದು ಮೃತಪಟ್ಟ ಹಿನ್ನೆಲೆಯಲ್ಲಿ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಕಂಡಕ್ಟರ್ ಸೇರಿ ಯಾರು ಕೂಡಾ ಫುಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ. ಸಮಯ ಫಾಲೋ ಮಾಡಬೇಡಿ, ಸೇಫ್ಟಿ ಮೊದಲು ಕಾಯ್ದುಕೊಳ್ಳಿ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್ ಕಂಡಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು 15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದು ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಅದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರ್ರಿಯಾಗಿ ವರ್ತಿಸುತ್ತಿದ್ದು ಬಸ್ಸಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!