ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಢಿಕ್ಕಿ, ಮೂವರು ಮೃತ್ಯು
ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಇಲ್ಲಿನ ಸಮೀಪದ ಅಡ್ಕಾರು ಎಂಬಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು ಎಂದು ಗುರುತಿಸಲಾಗಿದೆ.
ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಢಿಕ್ಕಿಯಾಗಿತ್ತು. ನಾಲ್ವರ ಪೈಕಿ ಗಂಬೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.





