ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಹೊಸ ಪಡಿತರ ಚೀಟಿ ವಿತರಣೆಗೆ ಸರ್ಕಾರ ಯಾವಾಗ ಅನುಮತಿ ಕೊಡುತ್ತದೆ ಎಂಬ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಇಲ್ಲ.
ಇನ್ನು ಈಗಾಗಲೇ ಬಿಪಿಎಲ್ ಕಾರ್ಡ್ಗೆ ಸಲ್ಲಿಕೆಯಾದ ಅರ್ಜಿಗಳು ವಿಲೇವಾರಿಯಾಗಿಲ್ಲ. ಇದರ ಮಧ್ಯೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳಲು ಬಿಪಿಎಲ್ ಕಾರ್ಡ್ಗಾಗಿ ಜನರು ಅಲೆದಾಡುತ್ತಿದ್ದಾರೆ.
ಇದರ ಮಧ್ಯೆ ಬಿಪಿಎಲ್ ದಾರರಿಗೆ ಹೊಸ ಸಂಕಷ್ಟ ಎದುರಾಗಿದೆ ಬಿಪಿಎಲ್ ಕಾರ್ಡ್ ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಿದ್ದಾರೆ. ಇದೀಗ ಸರ್ಕಾರ, ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ(ಸೆಪ್ಟೆಂಬರ್ 01) ಅವಕಾಶ ನೀಡಿದೆ.