March 15, 2026

ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಮಗುವನ್ನು ಕೊಲೆಗೈದ ಮಹಿಳೆ

0
image_editor_output_image1898231147-1693558667703.jpg

ಯಾದಗಿರಿ: ಮಲತಾಯಿಯೊಬ್ಬಳು ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಹಸುಗೂಸನ್ನೇ ಕೊಲೆಗೈದ ಆರೋಪವೊಂದು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ಕೇಳಿಬಂದಿದೆ.

ಈ ಘಟನೆ ಆಗಸ್ಟ್ 30ರಂದು ಬಬಲಾದ ಗ್ರಾಮದಲ್ಲಿ ನಡೆದಿದೆ. ದೇವಮ್ಮ ಚೆಟ್ಟಿಗೇರಿ ಆರೋಪಿಯಾಗಿದ್ದು, ಈಕೆ ಹಸುಗೂಸು ಸಂಗೀತಾ ಚೆಟ್ಟಿಗೇರಿಗೆ ಹಾಲಿನಲ್ಲಿ ವಿಷ ಬೆರೆಸಿ ಸಾಯಿಸಿದ್ದಾಳೆ.

ಮೃತ ಹಸುಗೂಸು ಸಂಗೀತಾಳಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಿದ್ದಾಗ ಅಲ್ಲಿಗೆ ಬಂದ ದೇವಮ್ಮ, ತಾನು ಹಾಲುಣಿಸುತ್ತೇನೆ ಅಂತಾ ಕರೆದೊಯ್ದಿದ್ದಾಳೆ. ಹೀಗೆ ರೂಮಿಗೆ ಕರೆದೊಯ್ದು ಡೋರ್ ಹಾಕಿ ಹಾಲಿನ ಬಾಟ್ಲಿಯಲ್ಲಿ ವಿಷ ಬೆರೆಸಿ ಕೂಸಿಗೆ ಕೊಟ್ಟಿದ್ದಾಳೆ.

Leave a Reply

Your email address will not be published. Required fields are marked *

error: Content is protected !!