March 15, 2026

ಉಡುಪಿ: ಕರ್ತವ್ಯ ಲೋಪ: ಮುಖ್ಯ ಶಿಕ್ಷಕಿ ಸೇವೆಯಿಂದ ವಜಾ

0
IMG-20230901-WA0002.jpg


 
ಉಡುಪಿ: ಮುಖ್ಯ ಶಿಕ್ಷಕಿಯ ವಿರುದ್ದ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ದಾಖಲಾದ ದೂರಿಗೆ ಸಂಬಂಧಿಸಿದಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಕಾರ್ಕಳ ತಾಲೂಕು ಎಣ್ಣೆಹೊಳೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಬಿ ಅವರು, ಈ ಹಿಂದೆ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಹಾಗೂ ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ದಾಖಲಾದ ದೂರಿಗೆ ಸಂಬಂಧಿಸಿದಂತೆ, ಇಲಾಖಾ ವಿಚಾರಣಾ ವರದಿಯನ್ವಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಂತೆ, ಕರ್ನಾಟಕ ನಾಗರೀಕ ಸೇವಾ ನಿಯಮಗಳ ಅನ್ವಯ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!