May 27, 2026

ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಅಟ್ಟಾಡಿಸಿ ಹಲ್ಲೆ

0
image_editor_output_image-690512716-1693645365744.jpg

ಚಿಕ್ಕಮಗಳೂರು: ನನ್ನ ಕೆಲಸದ ಸಮಯ ಮುಗಿದಿದೆ, ಬೇರೆಯವರು ಪೆಟ್ರೋಲ್ ಹಾಕುತ್ತಾರೆ ಎಂದಿದ್ದಕ್ಕೆ ವ್ಯಕ್ತಿಯೊಬ್ಬ ಬಂಕ್ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಘಟನೆ ಮೂಡಿಗೆರೆಯ ಜನ್ನಾಪುರದಲ್ಲಿ ನಡೆದಿದೆ.

ಬಂಕ್ ಸಿಬ್ಬಂದಿ ಕೆಲಸ ಮುಗಿಸಿ ಹೊರಟಿದ್ದ ವೇಳೆ ಕಾರಿನಲ್ಲಿ ಬಂದ ವ್ಯಕ್ತಿ ಪೆಟ್ರೋಲ್ ಹಾಕುವಂತೆ ಹೇಳಿದ್ದಾನೆ. ಇದಕ್ಕೆ ಸಿಬ್ಬಂದಿ ಕೆಲಸದ ಸಮಯ ಮುಗಿದಿದೆ.

ಇನ್ನೊಬ್ಬರು ಪೆಟ್ರೋಲ್ ಹಾಕುತ್ತಾರೆ ಎಂದಿದ್ದಾರೆ. ಈ ವಿಚಾರಕ್ಕೆ ಕಾರಿನಲ್ಲಿ ಬಂದಿದ್ದ ಮಧು ಹುರುಡಿ ಎಂಬಾತ ಬಂಕ್ ಮ್ಯಾನೇಜರ್ ಸೇರಿದಂತೆ ನಾಲ್ವರ ಮೇಲೆ ಬ್ಯಾಟ್‍ನಲ್ಲಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ನಾಲ್ವರು ತಪ್ಪಿಸಿಕೊಳ್ಳಲು ಓಡಿಹೋಗುತ್ತಿರುವುದು ಸ್ಥಳೀಯರ ಮೊಬೈಲ್‍ನಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!