ಕಾಂಗ್ರೆಸ್ ಗೆ ಭವಿಷ್ಯ ಇಲ್ಲ, ಈಗಾಗಿ ಕಾಂಗ್ರೆಸ್ ನಾಯಕರು ಶೀಘ್ರ ಬಿಜೆಪಿಗೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ನೂರಕ್ಕೆ ನೂರು ಆಪರೇಷನ್ ಕಮಲ ಆಗುತ್ತದೆ. ಈ ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ. ಈಗಾಗಿ ಎಲ್ಲಾ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ದೊಡ್ಡ ಸುದ್ದಿ ಮಾಡುತ್ತಿದೆ. ಬಿಜೆಪಿ ಒಪ್ಪಿಗೆ ಕೊಟ್ಟರೆ ಅರ್ಧ ಶಾಸಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುತ್ತಿದ್ದಾರೆ. ಆದರೆ ಒಬ್ಬನೇ ಒಬ್ಬ ಶಾಸಕ ಕಾಂಗ್ರೆಸ್ ಗೆ ಹೋಗಿಲ್ಲ. ಪಾರ್ಲಿಮೆಂಟ್ ಚುನಾವಣೆ ಹಿಂದೆ ಅಥವಾ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಇರಲ್ಲ ಎಂದರು.