ಕಾರು-ರಿಕ್ಷಾ ನಡುವೆ ಅಪಘಾತ: ಕುಂದಾಪುರ ಯುವತಿ ಮೃತ್ಯು

ಕುಂದಾಪುರ: ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಕುಂದಾಪುರ ತಾಲೂಕಿನ ಅಂಪಾರು ನಿವಾಸಿ ಅಂಬಿಕಾ ಎಂಬಾಕೆ ಮೃತಪಟ್ಟ ಘಟನೆ ಶುಕ್ರವಾರ ಕಂದಾವರ ಗ್ರಾಮದ ಮೂಡ್ಲಕಟ್ಟೆ ಕಂಬಳಗದ್ದೆ ಸಮೀಪ ನಡೆದಿದೆ.
ಅಂಬಿಕಾ ಅವರು ಕುಂದಾಪುರದ ಸಂಬಂಧಿಕರ ಮನೆಯಿಂದ ಅಂಪಾರಿಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಎದುರಿ ನಿಂದ ಬಂದ ಕಾರು ಮತ್ತೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.