March 15, 2026

ಕಾಸರಗೋಡು: ಕರ್ನಾಟಕದಿಂದ ಕೇರಳಕ್ಕೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಾಟ: ಮಂಗಳೂರಿನ ವ್ಯಕ್ತಿ ಪೊಲೀಸರ ವಶಕ್ಕೆ

0
IMG-20230902-WA0002.jpg


 
ಕಾಸರಗೋಡು: ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಮಂಗಳೂರು ನಿವಾಸಿಯನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ಬಂಧಿಸಿದ್ದಾರೆ.

ಮಂಗಳೂರು ಗೋರಿಗುಡ್ಡೆ ಲೋಬೊ ಕಂಪೌಂಡ್ ನ ಬಾಲಕೃಷ್ಣ (50) ಬಂಧಿತ ಆರೋಪಿ.

ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಕಾರನ್ನು ತಡೆದು ಪರಿಶೀಲಿಸಿದಾಗ ಬಾಕ್ಸ್ ಗಳಲ್ಲಿ ತುಂಬಿಸಿ ಸುಮಾರು 4500 ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಕುಂಬಳೆ ಕಡೆಗೆ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.”

Leave a Reply

Your email address will not be published. Required fields are marked *

error: Content is protected !!