July 6, 2026

ಉಪ್ಪಿನಂಗಡಿ: ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ: ಇಬ್ಬರು ಪೊಲೀಸರ ವಶಕ್ಕೆ

0
1693582901109-2.jpg



ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ, ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ಮಾದಕ ದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.

ಬಂಟ್ವಾಳ ಪೆರ್ನೆ ನಿವಾಸಿಗಳಾದ ಮಹಮ್ಮದ್ ಸಫೀಕ್ (24) ಹಾಗೂ ಅಬ್ದುಲ್ ಸಲೀಂ (24) ಬಂಧಿತ ಆರೋಪಿಗಳು.

ಇಬ್ಬರು ವ್ಯಕ್ತಿಗಳು ಅಮಲು ಸೇವನೆ ಮಾಡಿ ನಶೆಯಲ್ಲಿದ್ದಂತೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿಗಳು ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವೇಳೆ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಇನ್ನು ಆರೋಪಿಗಳಿಂದ ಅಂದಾಜು 7.500 ಮೌಲ್ಯದ 2 ಮೊಬೈಲ್ ಪೋನ್ ವಶಕ್ಕೆ ಪಡೆಕೊಳ್ಳಲಾಗಿದೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!