ಬಂಟ್ವಾಳ: ಗ್ರಾಮ ಪಂಚಾಯತ್ ಎರಡನೇ ಅವಧಿಯ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ: ರಮನಾಥ ರೈ ನೇತೃತ್ವದಲ್ಲಿ ಗೌರವ
ಬಂಟ್ವಾಳ: ಬಂಟ್ವಾಳ ವಿಧಾನ ಸಭಾಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ/ಉಪಾಧ್ಯಕ್ಷರಾಗಿ ಆಯ್ಕೆಯಾದವರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಪಕ್ಚದ ಕಛೇರಿಯಲ್ಲಿ ಇಂದು ಜರುಗಿತು.

ಸಮಾರಂಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ ಪಾಣೆಮಂಗಳೂರು ಬ್ಲಾಕ್ ವ್ಯಾಪ್ತಿಯಲ್ಲಿ ಕಳೆದ ಬಾರಿ 9 ಗ್ರಾ.ಪಂಚಾಯತ್ ಆಡಳಿತವಿತ್ತು.ಈ ಬಾರಿ ಹೆಚ್ಚುವರಿಯಾಗಿ 4 ಗ್ರಾಮ ಪಂಚಾಯತ್ ಸೇರಿ 13 ಗ್ರಾ.ಪಂಚಾಯತ್ ಆಡಳಿತ ಕಾಂಗ್ರೆಸ್ ಬೆಂಬಲಿತ ತೆಕ್ಕೆಗೆ ಬಂದಿದ್ದು ಕಾಂಗ್ರೆಸ್ ಮಾಡಿದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿ ಆಡಳಿತಗಳು ಕೂಡ ಬದಲಾಗಿದೆ ಎಂದರು,ಅಲ್ಲದೇ ಮುಂದಿನ ಲೋಕಸಭಾ, ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಪಕ್ಷದ ಯಾರೇ ಅಭ್ಯರ್ಥಿಯಾದರು ಒಗ್ಗಟ್ಟಿನಿಂದ ದುಡಿದು ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯುತ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ರಾಮನಾಥ ರೈ ಮಾಜಿ ಪ್ರದಾನ ಮಂತ್ರಿಗಳಾದ ರಾಜೀವ್ ಗಾಂಧಿ ಅವರ ಕನಸಿನ ಕೂಸಾದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಈ ಹಿಂದೆ ಜಿಲ್ಲಾ ಪರಿಷತ್,ಜಿಲ್ಲಾ ಪಂಚಾಯತ್ ಗೆ ಅನುಧಾನಗಳು ಬರುತ್ತಿತ್ತು 2012 ರಲ್ಲಿ ಕಾಂಗ್ರೆಸ್ ಸರಕಾರವು ನೇರ ವರ್ಗಾವಣೆ ಕಾಂಸೆಪ್ಟ್ ಜಾರಿ ಮಾಡಿದ್ದರಿಂದ ಎಲ್ಲಾ ಗ್ರಾಮ ಪಂಚಾಯತ್ ಗಳು ಆಡಳಿದಲ್ಲಿ ಚುರುಕುಮುಟ್ಟಿಸುವ ಕೆಲಸಗಳು ಆರಂಭವಾದವು.ದೇಶದ ಅಭಿವೃದ್ಧಿ ಯಲ್ಲಿ ಕಾಂಗ್ರೆಸ್ ಪಾತ್ರ ಅದ್ವಿತೀಯ ಸಾಧನೆ ಎಂದು ಬಣ್ಣಿಸಿದರು.
ಕಾರ್ಯಕ್ರಮದಲ್ಲಿ 13 ಗ್ರಾ.ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ,ಮಾಜಿ. ಜಿ.ಪಂಚಾಯತ್ ಸದಸ್ಯರಾದ ಎಂ.ಎಸ್. ಮಹಮ್ಮದ್, ಮಾಜಿ ತಾಲೂಕು ಪಂಚಾಯತ್ ಅದ್ಯಕ್ಷರೂ,ಎ.ಪಿ.ಎಂ.ಸಿ.ಅದ್ಯಕ್ಷರಾಗಿದ್ದ ಪದ್ಮನಾಭ ರೈ,ತಾಲೂಕ್ ಪಂಚಾಯತ್ ಮಾಜಿ ಉಪಾದ್ಯಕ್ಷ ಅಬ್ಬಾಸ್ ಅಲಿ,ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಕುಳಾಲು ಸುಭಾಶ್ಚಂದ್ರ ಶೆಟ್ಟಿ, ತಾಲೂಕು ಸ್ಥಾಯಿ ಸಮಿತಿ ಅದ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಯುವಕಾಂಗ್ರೇಸ್ ಅದ್ಯಕ್ಷರಾದ ಇಬ್ರಾಹಿಂ ನವಾಝ್,ರಾಜ್ಯ ಮಹಿಳಾ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ,ಬಂಟ್ವಾಳ ಯುವಕಾಂಗ್ರೇಸ್ ಅದ್ಯಕ್ಷರಾದ ಸುರೇಶ್ ಜೋರಾ,ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಸ್ವಾಗತಿಸಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ವಂದಿಸಿದರು.




