ಪೊಲೀಸರಿಂದ ಕಿರುಕುಳ: ಸೆಲ್ಫಿ ವೀಡಿಯೋ ಮಾಡಿ ಮಹಿಳೆ ಆತ್ಮಹತ್ಯೆ
ರಾಮನಗರ: ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣದ ಕೋಟೆ ಬಡಾವಣೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಾಧುರಿ ಎಂದು ಗುರುತಿಸಲಾಗಿದೆ. ನಿದ್ರೆ ಮಾತ್ರೆ ಸೇವಿಸಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ವೀಡಿಯೋದಲ್ಲಿ ಚನ್ನಪಟ್ಟಣ ಟೌನ್ ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾಳೆ




