March 15, 2026

ಮಂಗಳೂರು: ಯುವಕನಿಗೆ ಚೂರಿ ಇರಿತ, ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ

0
image_editor_output_image-478562415-1693771715457.jpg

ಮಂಗಳೂರು: ಆಟವಾಡಿ ಮನೆಗೆ ಹಿಂತಿರುಗುತ್ತಿದ್ದ ಯುವಕನೋರ್ವನಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ ವರದಿಯಾಗಿದೆ.

ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌(23) ಗಾಯಗೊಂಡಿದ್ದು, ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇರಿತದ ಪರಿಣಾಮ ಅಫ್ವಾನ್ ಅವರ ಕೈಗೆ, ಕುತ್ತಿಗೆಗೆ ಗಾಯಗಳಾಗಿವೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!