March 22, 2026

ಮಂಗಳೂರು: ಯುವಕನಿಗೆ ಚೂರಿ ಇರಿತ ಪ್ರಕರಣ, ಮೂವರು ಆರೋಪಿಗಳ ಬಂಧನ

0
image_editor_output_image1606158066-1693806651793.jpg

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರಶಾಂತ್ (28), ಧನರಾಜ್ (23), ಯಾಜ್ಞೆಶ್ (22) ಎಂದು ಗುರುತಿಸಲಾಗಿದೆ.

ಕರಂಬಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಮಾರಣಾಂತಿಕ ಹಲ್ಲೆಗೊಳಗಾದ ಯುವಕ.

ರವಿವಾರ ರಾತ್ರಿ ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮುಹಮ್ಮದ್ ಸಫ್ವಾನ್ ನೊಂದಿಗೆ ಕರಂಬಾರಿನಿಂದ ಬಜಪೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ ಗಾಯಗಳಾಗಿವೆ. ಅವರನ್ನು ತಕ್ಷಣ ಬಜಪೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!