ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ನಾಲ್ವರು ಮೃತ್ಯು, ಮೂವರು ಗಂಭೀರ
ಚಿತ್ರದುರ್ಗ: ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ತುಮಕೂರು ನಗರದ ಶಂಶುದ್ದೀನ್ (40), ಮಲ್ಲಿಕಾ (37) ಕಲೀಲ್ (42), ತಬ್ರೀಜ್ (13) ಎಂದು ಗುರುತಿಸಲಾಗಿದೆ.
ನರ್ಗೀಸ್, ರೆಹಾನ್ ಹಾಗೂ ರೆಹಮಾನ್ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿಯಿಂದ ತುಮಕೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.




