ಹಣ್ಣಿನೊಳಗೆ ಗಾಂಜಾ ಇಟ್ಟು ಜೈಲಿನಲ್ಲಿರುವ ಕೈದಿಗಳಿಗೆ ಸಾಗಟ: ಮೂವರು ಆರೋಪಿಗಳ ಬಂಧನ

ಹಾಸನ: ಸೇಬು ಹಾಗೂ ಮೂಸಂಬಿ ಹಣ್ಣಿನ ಒಳಗೆ ಗಾಂಜಾ ಇಟ್ಟು ಕೈದಿಗಳಿಗೆ ಪೂರೈಸಲು ಯತ್ನಿಸಿದ ಮೂವರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತರಕಾರಿ ವ್ಯಾಪಾರಿ ತಬ್ರೇಜ್ (28), ಗುಜರಿ ವ್ಯಾಪಾರಿ ವಾಸಿಂ (21) ಹಾಗೂ ರಕೀಬ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಜಿಲ್ಲಾ ಕಾರಾಗೃಹದಲ್ಲಿರುವ ಕೈದಿಗಳಿಗೆ ಗಾಂಜಾ ಸಪ್ಲೈ ಮಾಡಲು ಪ್ಲ್ಯಾನ್ ಮಾಡಿ ಸೇಬು ಹಾಗೂ ಮೂಸಂಬಿ ಹಣ್ಣನ್ನು ಕೊರೆದು ಅದರೊಳಗೆ ಗಾಂಜಾ ಸೊಪ್ಪನ್ನು ಇಟ್ಟು ಸ್ಟಿಕ್ಕರ್ ಅಂಟಿಸಿದ್ದರು.
ಬಳಿಕ ಹಣ್ಣುಗಳನ್ನು ಜೈಲಿನ ಹಿಂಬದಿಯಿಂದ ಕಾಂಪೌಂಡ್ ಒಳಗೆ ಎಸೆಯಲು ಹೊಂಚು ಹಾಕುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.